ವಿಶೇಷ ಚೇತನರ ದ್ವೀಚಕ್ರ, ತ್ರಿಚಕ್ರ ವಾಹನಗಳ ಜಾಥಾಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಂದ ಚಾಲನೆ

ವಿಶೇಷ ಚೇತನರ ದ್ವೀಚಕ್ರ, ತ್ರಿಚಕ್ರ ವಾಹನಗಳ ಜಾಥಾಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರಿಂದ ಚಾಲನೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ವಿಶೇಷ ಚೇತನರ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೇಟ್ಸ್ ಮುಂಭಾಗದಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಚಾಲನೆ ನೀಡಿದರು. ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತರ ತುಷಾರ್ ಗಿರಿ ನಾಥ್ ಅವರು ಮತದಾನದ ಪ್ರತಿಜ್ಞಾವಿಧಿ ಬೋದಿಸಿದರು. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿ ಕೂರ್ಮ ರಾವ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನಿಂದ ಕಂಠೀರವ ಕ್ರೀಡಾಂಗಣದವರೆಗೆ ವಿಶೇಷ ಚೇತನರ ದ್ವೀಚಕ್ರ/ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.