ಚಿತ್ರನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ

ಚಿತ್ರನಟಿ ಛಾಯಾಸಿಂಗ್ ತಾಯಿ ಮನೆಯಲ್ಲಿ ಕಳ್ಳತನ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಬಹುಭಾಷಾ ನಟಿ ಛಾಯಾಸಿಂಗ್ ಅವರ ತಾಯಿ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳತನ ಮಾಡಿದ ಆರೋಪದ ಮೇಲೆ ಮನೆಕೆಲಸದಾಕೆ ಉಷಾ ಬಂಧಿತರು. ಬಂಧಿತಳಿಂದ 66 ಗ್ರಾಂ ಗೋಲ್ಡ್ ಸೇರಿ, 150 ಬೆಳ್ಳಿ ಆಭರಣ ವಶಕ್ಕೆ ಪಡೆಯಲಾಗಿದೆ. ಇದೀಗ ನಟಿ ಛಾಯಾ ಸಿಂಗ್ ತಾಯಿ ಚಮನಲತಾ ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆಯಿಂದ ಕೃತ್ಯ ಜರುಗಿದೆ. ಕೆಲಸದ ವೇಳೆ, ಚಿನ್ನಾಭರಣ ದೋಚಿ ಏನೂ ಅರಿಯದಂತೆ ಕೆಲಸದಾಕೆ ವರ್ತಿಸಿದ್ದಾರೆ. ಮನೆಯ ಮಾಲೀಕರು ಚಿನ್ನಾಭರಣ ಪರಿಶೀಲಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ವೇಳೆ ಕೆಲಸದಾಕೆ ಉಷಾ ಈ ಕೃತ್ಯ ಮಾಡಿರುವುದು ಬೆಳಕಿಗೆ ಬಂದಿದ್ದು, ಅವರನ್ನು ಬಂಧಿಸಿ ಆಭರಣ ವಶಪಡಿಸಿಕೊಂಡಿದ್ದಾರೆ.