ಶಿವರಾಜ್‌ಕುಮಾ‌ರ್ ಆಸ್ಪತ್ರೆಯಿಂದ ಡಿಸ್ಚಾರ್ಜ್..!

ಶಿವರಾಜ್‌ಕುಮಾ‌ರ್ ಆಸ್ಪತ್ರೆಯಿಂದ ಡಿಸ್ಚಾರ್ಜ್..!
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಲಿದ್ದಾರೆ. 

ಯಾವುದೇ ಗಂಭೀರ ಸಮಸ್ಯೆ ಇಲ್ಲ ಮತ್ತು ಕಿಡ್ನಿ ಸ್ಟೋನ್ ಆಗಿತ್ತು ಎನ್ನುವ ಮಾಹಿತಿ ಇದೆ. ಡಿಸ್ಟಾರ್ಜ್ ಆದ ನಂತರ ಚುನಾವಣೆ ಪ್ರಚಾರಕ್ಕೆ ತೆರಳೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಲೋಸಕಭಾ ಚುನಾವಣೆಯ ಪ್ರಚಾರ ಮತ್ತು ಸತತ ಚಿತ್ರೀಕರಣದಿಂದಾಗಿ ಸುಸ್ತಾಗಿದ್ದ ನಟ ಶಿವರಾಜ್ ಕುಮಾ‌ರ್ ಒಂದು ದಿನ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಿನ್ನೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಇಂದು ಮನೆಗೆ ವಾಪಸ್ಸಾಗಲಿದ್ದಾರೆ.