ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್‌ ಸೇರಿದಂತೆ ಇತರರು ಬಿಜೆಪಿ ಸೇರ್ಪಡೆ

ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್‌ ಸೇರಿದಂತೆ ಇತರರು ಬಿಜೆಪಿ ಸೇರ್ಪಡೆ
ಜಾಹೀರಾತಿಗಾಗಿ ಸಂಪರ್ಕಿಸಿ 6362546216

ಬೆಂಗಳೂರು: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್‌, ಮಾಜಿ ಸಂಸದರಾದ ಎಸ್.‌ ಶಿವರಾಮನಗೌಡ, ಮಾಜಿ ಕ್ರಿಕೆಟಿಗರಾದ ದೊಡ್ಡಗಣೇಶ್‌, ಮುಖಂಡರಾದ ಹರ್ಷ ಗೌಡ, ಗಾಯತ್ರಿ ಜಿ. ತಿಮ್ಮಾರೆಡ್ಡಿ ಗೌಡ, ಶ್ರೀನಿವಾಸ್‌, ತುಕಾರಾಮ್‌ ಗೌಡ ಸೇರಿದಂತೆ ಅವರ ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು. 

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್.‌ ಯಡಿಯೂರಪ್ಪ, ಡಿ. ವಿ. ಸದಾನಂದ ಗೌಡ, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾ ಮೋಹನ್‌ದಾಸ್‌ ಅಗರ್ವಾಲ್‌, ಪ್ರತಿಪಕ್ಷ ನಾಯಕರಾದ ಆರ್.‌ ಅಶೋಕ್‌, ಮಾಜಿ ಸಚಿವರಾದ ಸಿ. ಟಿ. ರವಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್‌ ಜಿ. ವಿ., ಪ್ರಮುಖರಾದ ಶ್ರೀ ಜನಾ‌ರ್ಧನ್‌ ರೆಡ್ಡಿ, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.